ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಎಂ - ಪಿಎಂ ಸ್ಥಾನಕ್ಕೆ ಕಂಟಕದ ಭವಿಷ್ಯ ನುಡಿದ ಸ್ವಾಮಿಜಿ

05:19 PM Aug 23, 2024 IST | Samyukta Karnataka

ಯಾದಗಿರಿ: ಪಿಎಂ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಫಿಕ್ಸ್..? ಎಂದು ಯಾದಗಿರಿಯ ಮಹಾದೇವಪ್ಪ ಪೂಜಾರಿಯಿಂದ ಭವಿಷ್ಯ ನುಡಿದಿದ್ದಾರೆ.
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ ದುರ್ಗಾದೇವಿ ದೇವಸ್ಥಾನ ಅರ್ಚಕ ಮಹಾದೇವಪ್ಪ ಪೂಜಾರಿ ಭವಿಷ್ಯ ನುಡಿದಿದ್ದು, ಕೇಂದ್ರದ ಎನ್‌ಡಿಎ ಸರ್ಕಾರ ಪತನವಾಗಲಿದೆ, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದಿದ್ದಾರೆ. ಈ ಮುಂಚೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಅರ್ಚಕ ಮಹದೇವಪ್ಪ ಪೂಜಾರಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.
ದೇವಿ ಕನಸಲ್ಲಿ ಬಂದು 9 ಜನ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದರು. ಕೊನೆಗೆ ಇಬ್ಬರಿಗೆ ಸಿಎಂ ಸ್ಥಾನ ನೀಡಲು ಪ್ರೇರಣೆ ನೀಡಿದಳು. ಆಗ ನಾನು ಡಿ.ಕೆ.ಶಿವಕುಮಾರ್ ಅವರಿಗೆ ಹೂವಿನ ಹಾರ ಹಾಕು ಎಂದೆ. ಆದರೆ ಸಿದ್ದರಾಮಯ್ಯನವರಿಗೆ ಹೂವಿನ ಹಾರ ಹಾಕಿದ್ದರು. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಎರಡನೇ ಅವಧಿಗೆ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕಾಲ ಬಂದಿದೆ, ನನ್ನ ಕನಸಿನಲ್ಲಿ ಸಚಿವ ಎಂ.ಬಿ.ಪಾಟೀಲ್ ಬಂದಿದ್ದರು, ಕಾಂಗ್ರೆಸ್‌ನಲ್ಲಿ ನಮ್ಮ ಲಿಂಗಾಯತರನ್ನು ಕಡೆಗಣಿಸುತ್ತಿದ್ದಾರೆ ಎಂದಿದ್ದಾರೆ, ಈ ಸರ್ಕಾರ ಬೀಳಿಸ್ತಿರಾ ಎಂದು ಕೇಳಿದ್ರು, ಬೀಳುತ್ತೆ ಎಂದಿದ್ದೆನೆ ಅದು ಜಾರಕಿಹೊಳಿ ಬ್ರದರ್ಸ್‌ನಿಂದ ಸರ್ಕಾರ ಬೀಳುತ್ತದೆ, ಸತೀಶ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಇದೆ, ಕೇಂದ್ರದಲ್ಲಿ ಮೋದಿ ಸರ್ಕಾರವು ಐದು ವರ್ಷದೊಳಗೆ ಬೀಳುತ್ತದೆ
ಎಂದು ಅರ್ಚಕರು ಹೇಳಿದ್ದಾರೆ.

Tags :
#DKShivakumar#NarendraModi#samyuktakarnataka#siddaramaiah
Next Article