ಸಿಎಂ ಬಜೆಟ್ ಮಂಡನೆ: ಪ್ರತಿಪಕ್ಷಗಳಿಂದ ಗದ್ದಲ
10:52 AM Feb 16, 2024 IST
|
Samyukta Karnataka
ಬೆಂಗಳೂರು: ಬಜೆಟ್ ಮಂಡನೆ ವೇಳೆ ಪ್ರತಿಪಕ್ಷಗಳಿಂದ ಗದ್ದಲದ ವಾತಾವಾರಣ ಸೃಷ್ಟಿಯಾಗಿದೆ.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು ಎಂದು ಪ್ರತಿಪಕ್ಷಗಳಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ ಈ ಮದ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ಅಡೆತಡೆ ಇಲ್ಲದೆ ನಿರಂತರವಾಗಿ ಸಾಗಿದೆ.
Next Article