ಸಿಎಂ ವಿರುದ್ಧ ತನಿಖೆಗೆ ಆದೇಶ!
02:04 PM Sep 25, 2024 IST | Samyukta Karnataka
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿಂದ ವಿಚಾರಣೆ ನಡೆಯಿತು, ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ. ಎಫ್‌ಐಆರ್ ದಾಖಲಿಸಲು ಲೋಕಾಯುಕ್ತಕ್ಕೆ ಆದೇಶ ನೀಡಿದ್ದು, ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ಸಿಆರ್‌ಪಿಸಿ ಅನ್ವಯ ತನಿಖೆ ನಡೆಸಿ, ವರದಿ ಸಲ್ಲಿಸಲು ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ವಿಶೇಷ ನ್ಯಾಯಾಲಯ ಆದೇಶಿಸಿದೆ.