ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: 19ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಕರೆ

05:30 PM Aug 17, 2024 IST | Samyukta Karnataka

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ, ಆ. 19ರಂದು ಜಿಲ್ಲಾ ಡಿಸಿಸಿ ಕೇಂದ್ರಗಳ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಈ ಕುರಿತು ಎಲ್ಲ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ಪಕ್ಷಪಾತಿ ನಡೆಯನ್ನು ಖಂಡಿಸಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಜಿಲ್ಲಾ ಕೇಂದ್ರಗಳಲ್ಲಿ ದಿನಾಂಕ 19-08-2024 ಬೆಳಿಗ್ಗೆ 11-00 ಗಂಟೆಗೆ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕು ಹಾಗೂ ರಾಜ್ಯಪಾಲರ ಅಸಂವಿಧಾನಿಕ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ನೇರವಾಗಿ ಈ ಮೈಲ್ ಮೂಲಕ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಮೂಲಕ ಜ್ಞಾಪನಾ ಪತ್ರವನ್ನು ನೀಡಬೇಕು. ಈ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಕನಿಷ್ಠ ಅರ್ಧ ಕಿಲೋಮೀಟರ್ ಪಾದಯಾತ್ರೆ ಮೂಲಕ ಹೋಗಿ ಪ್ರತಿಭಟನೆ ಆರಂಭಿಸಬೇಕು. ಈ ಪ್ರತಿಭಟನೆಯ ವರದಿಯನ್ನು ಫೋಟೋ ಹಾಗೂ ವಿಡೀಯೋ ಸಮೇತ ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

Tags :
bengalorecongressdk shivakumarkpcc
Next Article