ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

“ಸಿದ್ದರಾಮಯ್ಯರ ರಾಜೀನಾಮೆ ಕೇಳುವುದು ಬಿಜೆಪಿಗರ ಮೂರ್ಖತನ”

07:32 PM Sep 24, 2024 IST | Samyukta Karnataka

ಮಂಗಳೂರು: “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ರಾಜೀನಾಮೆ ಕೇಳುವುದು ಬಿಜೆಪಿ ಅವರ ಮೂರ್ಖತನ. ಯಾಕೆಂದರೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮೊಕದ್ದಮೆ ರಾಜಕೀಯ ಪ್ರೇರಿತವಾಗಿರುವುದರಿಂದ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ. ಕಾಂಗ್ರೆಸ್ ಪಕ್ಷವು ಸಿದ್ದರಾಮಯ್ಯರವರ ಹಿಂದೆ ಸಂಪೂರ್ಣವಾಗಿ ಬೆಂಬಲಕ್ಕೆ ನಿಂತಿದೆ. ನ್ಯಾಯಾಲಯದ ಆದೇಶವನ್ನು ನಾವು ಮುಂದಿನ ಕಾನೂನು ಹೋರಾಟವನ್ನಾಗಿ ರೂಪಿಸುತ್ತೇವೆ. ನ್ಯಾಯಕ್ಕೆ ಜಯ ಸಿಗುತ್ತದೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಅವಶ್ಯಕತೆ ಇರುವುದಿಲ್ಲ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.
“ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಉಪಯೋಗಿಸಿ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ಜನರಿಂದ ಚುನಾಯಿಸಲ್ಪಟ್ಟ ಸರ್ಕಾರಗಳನ್ನು ನಾಮಾಂಕಿತ ರಾಜ್ಯಪಾಲರಿಂದ ಉರುಳಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಐಟಿ ಮತ್ತು ಸಿಬಿಐ ಕಾನೂನಿನ ದುರ್ಬಳಕೆ ಮಾಡಿ ಅಸ್ಥಿರಗೊಳಿಸುತ್ತಿರುವುದು ಪ್ರಜಾಪ್ರಭುತ್ವ ದೇಶದ ಸಂವಿಧಾನಕ್ಕೆ ಅಪಾಯಕಾರಿ ಬೆಳವಣಿಗೆ“ ಎಂದವರು ಹೇಳಿದರು.
“ಭಾರತೀಯ ಮುಖ್ಯ ನ್ಯಾಯಾಧೀಶರಾಗಿದ್ದವರನ್ನು ನಿವೃತ್ತಿಗೊಂಡ ತತಕ್ಷಣ ರಾಜ್ಯಸಭಾ ಸದಸ್ಯರನ್ನಾಗಿಸಿದ್ದು. ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾಗಿದ್ದವರನ್ನು ನಿವೃತ್ತಿಗೊಂಡ ನಂತರ ರಾಜ್ಯಪಾಲರನ್ನಾಗಿಸಿದ್ದು ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಗೆ ಉದಾಹರಣೆಯಾಗಿದೆ“ ಎಂದು ಭಂಡಾರಿ ಟೀಕಿಸಿದ್ದಾರೆ.

Tags :
cmmangaloremanjunathmudasiddaramaih
Next Article