For the best experience, open
https://m.samyuktakarnataka.in
on your mobile browser.

ಸಿದ್ದರಾಮಯ್ಯ ಡ್ರಾಮಾ ಮಾಡಿದ್ದಾರೆ

04:13 PM Mar 24, 2024 IST | Samyukta Karnataka
ಸಿದ್ದರಾಮಯ್ಯ ಡ್ರಾಮಾ ಮಾಡಿದ್ದಾರೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎನ್ ಡಿ ಆರ್ ಎಫ್ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಡ್ರಾಮಾ ಮಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಇಂತಹ ಕೆಟ್ಟ ಪರಿಸ್ಥಿತಿ ರಾಜ್ಯದ ಮುಖ್ಯಮಂತ್ರಿಗೆ ಬರಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಚಂಡಿಕಾ ಯಾಗ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆ ಹಣಕಾಸು ವ್ಯವಸ್ಥೆ ಸರಿಯಾಗಿ ನಿರ್ವಹಿಸಲು ಆಗುತ್ತಿಲ್ಲ. ನಾವು ಸೋತಿದ್ದೇವೆ ಎಂದು ಕೇಂದ್ರದ ಬಳಿ ಹೋಗಿ ಒತ್ತಾಯ ಮಾಡಬೇಕಿತ್ತು. ಅದನ್ನು ಬಿಟ್ಟು ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದರು.
ಬಿಜೆಪಿ ಮನೆ ಹಾಳಾಗ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ವಿನಾಶ ಕಾಲೇ ವಿಪರೀತ ಬುದ್ದಿ ಅಷ್ಟೇ. ಮುಂಬರುವ ಚುನಾವಣೆಯಲ್ಲಿ ಸೋಲನ್ನು ಎದುರು ನೋಡುತ್ತಿರುವ ಕಾಂಗ್ರೆಸ್ ಈ ರೀತಿ ಹೇಳಿಕೆ ನೀಡುತ್ತಿದೆ ಎಂದು ವ್ಯಂಗ್ಯವಾಡಿದರು.