ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್, ಸಚಿವರಾದ ಬೈರತಿ ಸುರೇಶ್, ಎಂ.ಸಿ ಸುಧಾಕರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ. ರಂಗನಾಥ್, ಕದಲೂರು ಉದಯ್, ನೆಲಮಂಗಲ ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಮಾಜಿ ಶಾಸಕ ಎಂ.ಸಿ ಅಶ್ವತ್ಥ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಎಸ್ ರವಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ ಗೆಲುವನ್ನು ಖಾತ್ರಿಪಡಿಸುತ್ತಿದೆ. ಚನ್ನಪಟ್ಟಣದಲ್ಲಿ ನಿಂತುಹೋಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮರುಚಾಲನೆ ನೀಡಲು ನಮ್ಮ ಅಭ್ಯರ್ಥಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ, ನನ್ನ ಕೈಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡುತ್ತೇನೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರ ಗೆಲುವು ಸಿದ್ದರಾಮಯ್ಯನ ಗೆಲುವು ಇದ್ದಂತೆ. ಇಲ್ಲಿ ಈ ಬಾರಿ ಕಾಂಗ್ರೆಸ್‌ನ ವಿಜಯದ ಪತಾಕೆ ಹಾರುವುದು ಗ್ಯಾರಂಟಿ ಎಂದಿದ್ದಾರೆ.