ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ
10:14 AM Jan 21, 2025 IST | Samyukta Karnataka
ಬೆಳಗಾವಿ: 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಸುವರ್ಣ ವಿಧಾನಸೌಧದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮಗಾಂಧೀಜಿ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ.
1924 ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. 1924 ರಲ್ಲಿ ಡಿಸೆಂಬರ್ 26 ರಂದು ನಡೆದ ಸಮಾವೇಶ ಅಧ್ಯಕ್ಷತೆ ಗಾಂಧೀಜಿ ವಹಿಸಿದ್ದರು. 10.30ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಮೆ ಅನಾವರಣ ಮಾಡಲಿದ್ದು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಸಿನಿಮಾ 4 ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜನಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು ಸೌಧದತ್ತ ಆಗಮಿಸುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಕಳೆದ ತಿಂಗಳು 27 ರಂದು ಈ ಸಮಾವೇಶ ನಡೆಯಬೇಕಿತ್ತು. ಮನಮೋಹನ್ ಸಿಂಗ್ ನಿಧನದಿಂದ ರದ್ದಾಗಿತ್ತು.