For the best experience, open
https://m.samyuktakarnataka.in
on your mobile browser.

ಸೆ.17ರಂದು ಹೈದರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲು ಕೇಂದ್ರ ಸರ್ಕಾರ ಘೋಷಣೆ

11:11 AM Mar 13, 2024 IST | Samyukta Karnataka
ಸೆ 17ರಂದು ಹೈದರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲು ಕೇಂದ್ರ ಸರ್ಕಾರ ಘೋಷಣೆ

ಬೆಂಗಳೂರು: ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಾಗಿ ಭಾರತ ಸರ್ಕಾರ ಘೋಷಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತುಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು 1948 ರಲ್ಲಿ 'ಆಪರೇಷನ್ ಪೋಲೋ' ಮೂಲಕ ಹೈದರಬಾದನ್ನು ನಿಜಾಮರ ಆಳ್ವಿಕೆಯಿಂದ ವಿಮುಕ್ತಗೊಳಿಸಿದ ನೆನಪಿಗಾಗಿ ಭಾರತ ಸರ್ಕಾರವು ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಾಗಿ ಘೋಷಿಸಿದೆ. ಈ ನಿರ್ಧಾರ ಹುತಾತ್ಮರನ್ನು ಗೌರವಿಸುವುದರೊಂದಿಗೆ ಯುವಕರಲ್ಲಿ ದೇಶಪ್ರೇಮವನ್ನು ತುಂಬಿ, ಈ ದಿನದ ಐತಿಹಾಸಿಕ ಮಹತ್ವವನ್ನು ಎತ್ತಿ ಹಿಡಿದಿದೆ ಎಂದಿದ್ದಾರೆ.
1947 ರ ಆಗಸ್ಟ್ 15 ರಂದು ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರವೂ ಹೈದರಾಬಾದ್​​ 13 ತಿಂಗಳ ಕಾಲ ಸ್ವಾತಂತ್ರ್ಯ ಸಿಗದೇ ನಿಜಾಮರ ಆಳ್ವಿಕೆಗೆ ಒಳಪಟ್ಟಿತ್ತು. 'ಆಪರೇಷನ್ ಪೋಲೋ' ಎಂಬ ಪೊಲೀಸ್ ಕ್ರಮದ ನಂತರ, ಈ ಪ್ರದೇಶವನ್ನು ಸೆಪ್ಟೆಂಬರ್ 17, 1948 ರಂದು ನಿಜಾಮರ ಆಳ್ವಿಕೆಯಿಂದ ಮುಕ್ತಗೊಳಿಸಲಾಯಿತು. ಹೈದರಾಬಾದ್ ವಿಮೋಚನಾ ದಿನವನ್ನು ಸೆಪ್ಟೆಂಬರ್ 17 ರಂದು ನಡೆಸಬೇಕೆಂದು ಈ ಭಾಗದ ಜನರು ಒತ್ತಾಯಿಸಿದ್ದರು ಎಂದು ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ವಿವರಿಸಿದೆ.
ಸೆಪ್ಟೆಂಬರ್ 17, 1948 ರಂದು, ಆಗಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಾರಂಭಿಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ನಿಜಾಮರ ಆಳ್ವಿಕೆಯಲ್ಲಿದ್ದ ಅಂದಿನ ಹೈದರಾಬಾದ್ ರಾಜ್ಯವನ್ನು ಭಾರತ ಒಕ್ಕೂಟಕ್ಕೆ ಸೇರಿಸಲಾಯಿತು.