ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೈಟ್‌ ಹಿಂದಿರುಗಿಸುತ್ತೇನೆ ಎಂದು ಮುಡಾಗೆ ಪತ್ರ ಬರೆದ ಸಿಎಂ ಪತ್ನಿ

10:13 PM Sep 30, 2024 IST | Samyukta Karnataka

ಬೆಂಗಳೂರು: ಮುಡಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಪತ್ರ ಬರೆದಿದ್ದಾರೆ.
ಮುಡಾ ಆಯುಕ್ತರಿಗೆ ಸುದೀರ್ಘ ಪತ್ರ ಬರೆದಿರುವ ಅವರು, 14 ಸೈಟುಗಳನ್ನು ಮುಡಾಗೆ ಹಿಂದಿರುಗಿಸಲು ಬಯಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿರುವ 3 ಮತ್ತು 4ನೇ ಹಂತದಲ್ಲಿರುವ 14 ಸೈಟುಗಳ ಕ್ರಯ ಪತ್ರ ಹಿಂತಿರುಗಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು, "ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ."
"ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ." ಎಂದು ಅವರು ಬರೆದಿದ್ದಾರೆ.

Tags :
#MUDACase#MUDAScambangalorechief ministercmmudamysoresiddaramaih
Next Article