For the best experience, open
https://m.samyuktakarnataka.in
on your mobile browser.

ಸೈನಿಕ ಶಾಲೆಯಲ್ಲಿ ಕನ್ನಡಿಗರಿಗೆ ಶೇ.65ರಷ್ಟು ಮೀಸಲಾತಿ

03:30 PM Jan 17, 2024 IST | Samyukta Karnataka
ಸೈನಿಕ ಶಾಲೆಯಲ್ಲಿ ಕನ್ನಡಿಗರಿಗೆ ಶೇ 65ರಷ್ಟು ಮೀಸಲಾತಿ

ಬೆಳಗಾವಿ: ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ. ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ. ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದರು.