ಸೊರೆನ್ ಅಧಿಕಾರ ಸ್ವೀಕಾರ
ರಾಂಚಿ: ಜಾರ್ಖಂಡ್‌ನ ೧೪ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್, ಪ್ರಮುಖ ರಾಜಕೀಯ ನಾಯಕರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ರಾಜಕೀಯ ನಾಯಕರು ಉಪಸ್ಥಿತರಿದ್ದರು. ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಸೊರೆನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದು ೪೯ ವರ್ಷ ವಯಸ್ಸಿನ ಜೆಎಂಎಂ ನಾಯಕ, ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೊರೆನ್ ತಮ್ಮ ಬರ್ಹೈತ್ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದರು. ಜೊತೆಗೆ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ ಅತ್ಯುತ್ತಮ ನಿರ್ವಹಣೆ ತೋರಿದೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ಪ್ರಮುಖ ವಿಪಕ್ಷ ನಾಯಕರು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್, ಉದ್ಧವ್ ಠಾಕ್ರೆ, ಅಖಿಲೇಶ್ ಯಾದವ್ ಮೆಹಬೂಬಾ ಮುಫ್ತಿ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮೊದಲಾದವರು ಉಪಸ್ಥಿತರಿದ್ದರು.