ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸೋನಾಮಾರ್ಗ್‌ ಸುರಂಗ ಇಂದು ಉದ್ಘಾಟನೆ

11:48 AM Jan 13, 2025 IST | Samyukta Karnataka

2680 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸುರಂಗ ಮಾರ್ಗ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.
ಈ ಸುರಂಗವು ಲೇಹ್ ಮಾರ್ಗದಲ್ಲಿ ಶ್ರೀನಗರ ಮತ್ತು ಸೋನಾಮಾರ್ಗ್ ನಡುವೆ ಸರ್ವ ಋತುವಿನಲ್ಲೂ ಸಂಪರ್ಕ ಒದಗಿಸಲಿದೆ. ಶ್ರೀನಗರ ಮತ್ತು ಲಡಾಖ್​ ಹೆದ್ದಾರಿಯಲ್ಲಿ ಪ್ರವಾಸಿಗರ ಪ್ರಮುಖ ಆಕರ್ಷಣೆಯ ತಾಣವಾಗಿರುವ ಸೋನ್​ ಮಾರ್ಗ್​​ ಅನ್ನು ಕೂಡ ಈ ಝಡ್​ ಮೋರ್ಹಾ ಟನಲ್​ ಸಂಪರ್ಕಿಸುತ್ತದೆ. ​ಚಳಿಗಾಲದಲ್ಲಿ ಭಾರಿ ಹಿಮಪಾತದಿಂದಾಗಿ ಸೋನ್​ಮಾರ್ಗ್​ ಜನರಿಗೆ ರಸ್ತೆ ಸಂಪರ್ಕ ಇಲ್ಲದಂತಾಹುತ್ತಿತ್ತು. ಚಳಿಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಸೋನ್​ಮಾರ್ಗ ಜನರಿಗೆ ಕಣಿವೆಯ ಇತರ ಜನರೊಂದಿಗೆ ಸಂಪರ್ಕ ಸಾಧಿಸುವುದು ದುಸ್ತರವಾಗುತ್ತಿತ್ತು. ಈ ನಿಟ್ಟಿನಲ್ಲಿ ಈ ಸುರಂಗ ಮಾರ್ಗ ಪ್ರಮುಖವಾಗಿದೆ.

Tags :
#ನರೇಂದ್ರಮೋದಿ
Next Article