For the best experience, open
https://m.samyuktakarnataka.in
on your mobile browser.

ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ಆರೋಪ ಮಾಡುತ್ತಿದೆ

01:35 PM Nov 10, 2024 IST | Samyukta Karnataka
ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ಆರೋಪ ಮಾಡುತ್ತಿದೆ

ಹುಬ್ಬಳ್ಳಿ: ಮೂರು ವಿಧಾಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲು ಖಚಿತವಾಗಿರುವುದರಿಂದ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಹಗರಣ ನಡೆಸಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಸರ್ಕಾರದ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಫಲಿತಾಂಶದ ಬಳಿಕ ಮುಖ್ಯಮಂತ್ರಿಗಳಿಗೆ ಭ್ರಷ್ಟಾಚಾರದ ವಿರುದ್ಧ ಜನ ಯಾವ ರೀತಿ ತಿರುಗಿ ಬೀಳುತ್ತಾರೆ ಎಂಬುದು ತಿಳಿಯಲಿದೆ ಎಂದರು.
ಉಪ ಚುನಾವಣಾ ಫಲಿತಾಂಶ ಬಂದ ನಂತರ ಹಗರಣಗಳ ಎಲ್ಲ ಆರೋಪಗಳಿಗೆ ಉತ್ತರ ಸಿಗಲಿದೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಹೇಳಿಕೆ ನೀಡುತ್ತಾರೆ ಎಂದು ನೋಡೋಣ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಮಾಡಿದ್ದು, ಅವರಿಗೆ ಸೋಲಿನ ಭಯ ಉಂಟಾಗಿದೆ. ಸಂಡೂರಿನಲ್ಲಿ ನಾಲ್ಕೈದು ದಿನ ಬೀಡು ಬಿಟ್ಟು ಪ್ರಚಾರ ನಡೆಸಿದ್ದಾರೆ. ಎಷ್ಟೇ ಪ್ರಯತ್ನ ಮಾಡಿದ್ದರೂ ಕಾಂಗ್ರೆಸ್‌ಗೆ ಸೋಲು ಖಚಿತ. ಶಿಗ್ಗಾಂವಿಯಲ್ಲಿ ಸಿಎಂ ಮೂರು, ನಾಲ್ಕು ದಿನ ಇದ್ದು ಪ್ರಚಾರ ನಡೆಸಿದರೂ ನಿರೀಕ್ಷಿತ ಜನ ಬೆಂಬಲ ದೊರೆತಿಲ್ಲ. ಜನರಿಗೆ ಹಣ ಕೊಟ್ಟರೂ ಪ್ರಚಾರಕ್ಕೆ ಬರಲಿಲ್ಲ. ಇದರಿಂದ ಸಿಎಂ ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಅಬಕಾರಿ ಇಲಾಖೆಯೊಂದರಲ್ಲಿಯೇ ಎಷ್ಟೊಂದು ಲೂಟಿ ಆಗಿದೆ ಎಂದು ಗುತ್ತುಗೆದಾರರೇ ಹೇಳುತ್ತಿದ್ದಾರೆ. ಇದೆಲ್ಲದರ ಪರಿಣಾಮ ಚುನಾವಣೆ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದು ಹೇಳಿದರು.

Tags :