ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು

01:39 PM Dec 23, 2023 IST | Samyukta Karnataka

ಮೈಸೂರು: ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,
ಅವರು ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿರುವ ಅವರು ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು.
ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ.
ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು. ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು.
ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧವಿದೆ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ.

Next Article