ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಕ್ಕೆ ಆಗ್ರಹ

01:49 PM Aug 06, 2024 IST | Samyukta Karnataka

ನವದೆಹಲಿ: ರಾಜ್ಯಸಭಾ ಅಧಿವೇಶನ ಸಮಯದಲ್ಲಿ ನಾರಾಯಣಸಾ ಭಾಂಡೆಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ.
ಬಾಗಲಕೋಟೆಯಲ್ಲಿ, ಕೇಂದ್ರ ಸರ್ಕಾರ ಕೈಗಾರಿಕಾ ಅಭಿವೃದ್ಧಿ ಸೇರಿದಂತೆ, ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ನೀಡಬೇಕು ಎಂದು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡೆಗೆ ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿ,ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾದ ಲಾಲ್ ಬಹದ್ದೂರ್ ಶಾಸ್ತ್ರಿ ಆಣೆಕಟ್ಟು ಯಿಂದಾಗಿ, ಬಾಗಲಕೋಟೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಬಗ್ಗೆ ಗಮನ ಸೆಳೆದರು.
ಕೃಷ್ಟ ಮೇಲ್ದೆಂಡೆ ಯೋಜನೆಯಲ್ಲಿ ಸುಮಾರು 160 ಗ್ರಾಮಗಳು, 4 ಲಕ್ಷ ಎಕರೆಗಿಂತ ಹೆಚ್ಚು ಫಲವತ್ತಾದ ಭೂಮಿಗಳನ್ನು ಕಳೆದುಕೊಂಡು ರೈತರು ನಿರಾಶ್ರಿತರಾಗಿ ಗುಳೆ ಹೋಗುತ್ತಿದ್ದಾರೆ. ಜಿಲ್ಲೆಯ 25000 ರೈತ ಕುಟುಂಬಗಳು ತಮ್ಮ ಆಶ್ರಯ,ವ್ಯಾಪಾರ ಮತ್ತು ಉದ್ಯೋಗಗಳನ್ನು ಕಳೆದುಕೊಳ್ಳುವಂತಾಗಿದೆ.
1 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆವುಳ್ಳ ಬಾಗಲಕೋಟೆ ನಗರದ 22,000ಕ್ಕಿಂತ ಹೆಚ್ಚು ಮನೆಗಳು, ವಾಣಿಜ್ಯ ಕಟ್ಟಡಗಳು ಮುಳುಗಿ ವ್ಯಾಪಾರ ಉದ್ಯೋಗ ಅವಕಾಶವನ್ನು ಕಳೆದುಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯು ಸುಣ್ಣದ ಕಲ್ಲು ಮತ್ತು ಗುಲಾಬಿ ಗ್ರಾನೈಟ್ ಸೇರಿದಂತೆ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿದೆ. ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿದೆ.
ಜಿಲ್ಲೆಗೆ ಉತ್ತಮ ಸಂಪರ್ಕ ಕಲ್ಪಿಸುವ ಬ್ರಾಡ್ ಗೇಜ್ ರೈಲ್ವೆ ಮಾರ್ಗ, ರಾಷ್ಟ್ರೀಯ ಹೆದ್ದಾರಿಗಳು 2014ರ ನಂತರ ಕೇಂದ್ರದ ಬಿಜೆಪಿ ಸರಕಾರದ ಆಡಳಿತದ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿದೆ.
ಆಲಮಟ್ಟಿ ಜಲಾಶಯದ ಮುಳಗಡೆಯಿಮದಾಗಿ ಸಂತ್ರಸ್ತ ರಾಗಿದ್ದ ಕುಟುಂಬಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ಉತ್ತೇಜನ ನೀಡಲು ಕೈಗಾರಿಕಾ ಕಾರಿಡರನ್ನು
ಅಭಿವೃದ್ಧಿ ಪಡಿಸಿ ಆ ಕೈಗಾರಿಕೆಗಳಿಗೆ ತೆರಿಗೆ ವಿನಾಯತಿಗಳನ್ನು ಒದಗಿಸಬೇಕು ಎಂದು ಮನವಿ ಭಾಂಡೆಗೆ ಮನವಿ ಮಾಡಿಕೊಂಡರು.
ಕರ್ನಾಟಕದ ಬಾಗಲಕೋಟೆ ಜಿಲ್ಲೆಗೆ ವಿಶೇಷ ಯೋಜನೆಯಡಿ ಆದಾಯ ಮತ್ತು ವಾಣಿಜ್ಯ ತೆರಿಗೆಯಲ್ಲಿ ರಿಯಾಯಿತಿಯನ್ನು ಘೋಷಿಸಬೇಕು.
ಕೇಂದ್ರ ಸರ್ಕಾರದ ಉದ್ಯೋಗಾವಕಾಶಗಳಲ್ಲಿ ಬಾಗಲಕೋಟೆ ಜನರಿಗೆ ಮೀಸಲಾತಿಯನ್ನು ಕಲ್ಪಿಸಬೇಕು.
ಬಾಗಲಕೋಟೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಕೈಗಾರಿಕಾ ಸ್ಥಾಪನೆಗೆ ಹೆಚ್ಚು ಒತ್ತು ಕೊಡಬೇಕೆಂದು ಕರ್ನಾಟಕದವ್ರೇ ಆಗಿರುವ ಕೇಂದ್ರ ಸಚಿವರುಗಳಾದ, ಹಣಕಾಸು ಮಂತ್ರಿಗಳು, ಕೈಗಾರಿಕಾ ಮಂತ್ರಿಗಳು, ಮತ್ತು ವಾಣಿಜ್ಯ ಮಂತ್ರಿಗಳಿಗೂ ತಮ್ಮ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ನಾರಾಯಣಸಾ ಭಾಂಡೆಗೆ ರಾಜ್ಯಸಭೆ ಯಲ್ಲಿ ನಡೆದ ಅಧಿವೇಶನ ಸಮಯದಲ್ಲಿ ಬಾಗಲಕೋಟೆ ಜಿಲ್ಲೆಯ ಸಮಗ್ರ ಮಾಹಿತಿ ಜೊತೆಗೆ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲಿದರು.

Tags :
#narayansabhandage
Next Article