ಸ್ಥಾಯಿ ಸಮಿತಿ ಅಧ್ಯಯನ ಭೇಟಿ
05:52 PM Jan 21, 2025 IST
|
Samyukta Karnataka
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯ ಕೇಂದ್ರ ಕಾರ್ಮಿಕ, ಜವಳಿ ಹಾಗೂ ಕೌಶಲ್ಯಾಭಿವೃದ್ಧಿ ಸ್ಥಾಯಿ ಸಮಿತಿ ಸಭೆ ಬೆಂಗಳೂರಿನಲ್ಲಿಂದು ನಡೆಯಿತು.
ಕೇಂದ್ರ ಕಾರ್ಮಿಕ, ಜವಳಿ ಹಾಗೂ ಕೌಶಲ್ಯಾಭಿವೃದ್ದಿ ಸ್ಥಾಯಿ ಸಮಿತಿ ವತಿಯಿಂದ ವಿವಿಧ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು, ವಿವಿಧ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಸಭೆಯನ್ನು ಆಯೋಜಿಸಿತ್ತು.
Next Article