ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

`ಹಗರಣ ಮಾಡುವದೇ ಕಾಂಗ್ರೆಸ್ಸಿನ ಹುಟ್ಟು ಗುಣ'

07:32 PM Nov 10, 2024 IST | Samyukta Karnataka

ಸವಣೂರ: ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ಪರ ಜನರ ಒಲವು ನಿಚ್ಚಳವಾಗಿದೆ. ಈ ಬಾರಿ ಮತ್ತೊಮ್ಮೆ ಬಿಜೆಪಿ ಕಮಲ ಅರಳುವುದು ನಿಶ್ಚಿತ ಎಂದು ಕೆ.ಎಲ್.ಇ ಅಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಪಟ್ಟಣದ ಅಡವಿಸ್ವಾಮಿ ಮಠಕ್ಕೆ ಭೇಟಿ ನೀಡಿ ಮತಯಾಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ಗುತ್ತಿಗೆದಾರರಿಗೆ ಕಾಮಗಾರಿಯ ಹಣವನ್ನು ಪಾವತಿಸದೇ ಇರುವದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಹೀಗಾದರೆ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಸಿಎಂ, ಡಿಸಿಎಂ ಅವರಿಗೆ ಬೆಂಗಳೂರಿನ ಚಿಂತೆಯಾಗಿದೆ. ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಈ ರಾಜ್ಯದಲ್ಲಿ ಗ್ಯಾರಂಟಿಗಳಿಂದ ಬೊಕ್ಕಸವನ್ನು ಕಾಂಗ್ರೆಸ್ ಪಕ್ಷ ಖಾಲಿ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ವಕ್ಫ್ ಹೆಸರನ್ನು ಪಹಣಿಯಲ್ಲಿ ನೋಡಿದ ಈ ಭಾಗದ ಎಷ್ಟೋ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು. ರೈತರ ಬಗ್ಗೆ ಕಾಳಜಿ ಇದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ ಉಳುವವನೇ ಒಡೆಯ ಎಂದು ಮಾಡಿದ್ದನ್ನು ಇವರ ಕೈಯಿಂದ ಉಳಿಸಲು ಸಾಧ್ಯವಾಗುತ್ತಿಲ್ಲ. ಇಂತವರಿಂದ ಮೊದಲು ರೈತರನ್ನು ಕಾಪಾಡಬೇಕಿದೆ. ಇಂತವರಿಗೆ ಮೊದಲು ಪಾಠ ಕಲಿಸಬೇಕಿದೆ. ಹಗರಣಗಳನ್ನು ಮಾಡುವದು ಕಾಂಗ್ರೆಸಿನ ಹುಟ್ಟು ಗುಣ. ವಿಶೇಷವಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ವಕ್ಫ್ ಮತ್ತು ಹಗರಣಗಳಿಂದಾಗಿ ಕಾಂಗ್ರೆಸ್ ಪಕ್ಷ ತಕ್ಕ ಶಾಸ್ತಿಯನ್ನು ಅನುಭವಿಸಲಿದೆ ಎಂದರು.

Next Article