ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಳೇಹುಬ್ಬಳ್ಳಿ ಪ್ರಕರಣ ವಾಪಸ್ ಪಡೆದ ಸರ್ಕಾರದ ನಿರ್ಧಾರ ಸ್ವಾಗತಾರ್ಹ

05:33 PM Oct 14, 2024 IST | Samyukta Karnataka

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪ್ರಕರಣ ಸೇರಿದಂತೆ ಒಟ್ಟು ೪೩ ಪ್ರಕರಣವನ್ನು ಕ್ಯಾಬಿನೆಟ್‌ನಲ್ಲಿ ಸರ್ಕಾರ ವಾಪಾಸ್ ಪಡೆದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಇದರಲ್ಲಿ ರಾಜಕಾರಣ ಬರುವುದಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜಕೀಯ ಒತ್ತಡದಿಂದ ಬಹಳಷ್ಟು ಜನರಿಗೆ ಅನ್ಯಾಯ ಆಗಿತ್ತು. ಅದನ್ನು ಸುದೀರ್ಘವಾಗಿ ಚರ್ಚೆ ಮಾಡಿ ಕ್ಯಾಬಿನೆಟ್‌ನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಓಲೈಕೆ ರಾಜಕೀಯ ಯಾರು ಮಾಡುತ್ತಿದ್ದಾರೆ. ಬಿಜೆಪಿಯವರು ಇದನ್ನು ಬಿಟ್ಟರೆ ಏನು ಹೇಳುತ್ತಾರೆ. ಸುಖಾಸುಮ್ಮನೆ ಬಿಜೆಪಿಯವರು ಹೇಳುತ್ತಾರೆ. ವಾಪಾಸ್ ಪಡೆದ ೪೩ ಪ್ರಕರಣದಲ್ಲಿ ಅನೇಕ ಕೇಸ್‌ಗಳು ಇದೇ ತರಹ ಇದೆ. ಅದರ ಬಗ್ಗೆ ಇವರೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಆರೋಪಿಗಳ ಬಂಧನದ ನಂತರ ೯೦ ದಿನಗಳ ಒಳಗಾಗಿ ಚಾರ್ಜ್‌ಶೀಟ್ ಸಲ್ಲಿಸಬೇಕೆಂಬ ನಿಯಮವಿದೆ. ಆದರೆ ೯೦ ದಿನಗಳ ಒಳಗಾಗಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ. ಹೀಗಾಗಿ, ಬೇಲ್ ಪಡೆಯಲು ಸಾಧ್ಯವಾಗಿದೆ ಎಂದರು.
ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಹೀಗಾಗಿ, ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಅಮಾಯಾಕರ ಮೇಲೆ ಆಗಿದೆ ಎಂದು ಹಿಂಪಡೆದಿದ್ದಾರೆ ಎಂದು ಹೇಳಿದರು.
ಪ್ರಕರಣದಲ್ಲಿ ಎಲ್ಲರೂ ಅಮಾಯಕರು ಇದ್ದಾರೆ ಎಂದು ನಾನು ಹೇಳುವುದಿಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮವಾಗಲಿ. ಆದರೆ, ಬಿಜೆಪಿಯವರು ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ದೇಶದಲ್ಲಿ ಜಾತಿಧರ್ಮ ಬಿಟ್ಟು ಒಗ್ಗಟ್ಟಾಗಿ ಇದ್ದರೂ ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗಿದ್ದಾಗ ಇವರಿಗೆ ಪ್ರತಿಭಟನೆ ಮಾಡುವುದಕ್ಕೆ ಯಾವ ನೈತಿಕತೆ ಇದೆ. ನಿಜವಾಗಿಯೂ ಬಿಜೆಪಿಯವರು ಭಯೋತ್ಪಾದಕರು ಎಂದು ಅಬ್ಬಯ್ಯ ಹೇಳಿದರು.

Next Article