ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಾಲು ರಸ್ತೆಗೆ ಸುರಿದು ಮಹಿಳೆಯರಿಂದ ಆಕ್ರೋಶ‌

01:07 PM Nov 25, 2024 IST | Samyukta Karnataka

ಸೂಪರ್ ಸೀಡ್ ಹಾಕಿದ್ದಾರೆ, ಕೋರ್ಟ್‌ನಲ್ಲಿದೆ ಆದೇಶ ಬಂದ್ಮೇಲೆ ಬಿಲ್ ಆಗತ್ತೆ

ಮಂಡ್ಯ: ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್​ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಡೈರಿಯಲ್ಲಿ ಹಾಲು ಖರೀದಿಸಿಲ್ಲ ಎಂದು ಆರೋಪಿಸಿದ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಜಲ್ಲೆಯ ನಾಗಮಂಗಲ ತಾಲ್ಲೂಕಿನ ಕಾಡಂಕನಹಳ್ಳಿ ಗ್ರಾಮದಲ್ಲಿ ಹಾಲು ಖರೀದಿ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ, ಗ್ರಾಮದ ಹಾಲನ್ನು ಸ್ವೀಕರಿಸದಂತೆ ಉತ್ಪಾದಕರ ಸಂಘಕ್ಕೆ ಸೂಚನೆ ನೀಡಿದ್ದಾರೆ. ಸೂಪರ್ ಸೀಡ್ ಆರೋಪ ಕೇಳಿಬಂದಿದೆ ಹಾಗಾಗಿ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಸಚಿವರ ಸೂಚನೆ ಮೇರೆಗೆ ಅಧಿಕಾರಿಗಳು ನಮ್ಮ ಗ್ರಾಮದ ಹಾಲನ್ನು ಸ್ವೀಕರಿಸುತ್ತಿಲ್ಲ. ಎರಡು ತಿಂಗಳಿನಿಂದ ಬಿಲ್ ಕೂಡ ಕೊಟ್ಟಿಲ್ಲ. ಯಾಕೆ ಅಂತ ಕೇಳಿದ್ರೆ ಸೂಪರ್ ಸೀಡ್ ಹಾಕಿದ್ದಾರೆ, ಕೋರ್ಟ್‌ನಲ್ಲಿದೆ ಆದೇಶ ಬಂದ್ಮೇಲೆ ಬಿಲ್ ಆಗತ್ತೆ ಅಂತ ಹೇಳುತ್ತಿದ್ದಾರೆ. ಹಾಲು ಖರೀದಿಸದ ಹಿನ್ನೆಲೆಯಲ್ಲಿ ಮಹಿಳೆಯರು ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ಹೊರಹಾಕಿದ್ದಾರೆ.

Tags :
#ಮಂಡ್ಯ#ಹಾಲು
Next Article