ಹಾವೇರಿ ಭೀಕರ ಅಪಘಾತ: ಪರಿಹಾರಕ್ಕೆ ಗಣ್ಯರ ಆಗ್ರಹ
ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸೂಕ್ಯ ಪರಿಹಾರಕ್ಕೆ ಆಗ್ರಹಿಸಿದ್ದಾರೆ
ಬಸವರಾಜ ಬೊಮ್ಮಾಯಿ ಆಗ್ರಹ: ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಹ್ಲಾದ ಜೋಶಿ: ಇಂದು ಮುಂಜಾನೆ ಹಾವೇರಿ ಜಿಲ್ಲೆ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ತಿಳಿದು ಬಹಳ ದುಃಖವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಮತ್ತು ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸುತ್ತೇನೆ.