ಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
01:25 PM Jun 28, 2024 IST | Samyukta Karnataka
ನವದೆಹಲಿ: ಹಾವೇರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.