ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಾವೇರಿ ವಕ್ಫ್ ವಿವಾದ: ಪಂಚಾಯತ್‌ ಕ್ರಮಕ್ಕೆ ಜೋಶಿ ಖಂಡನೆ

04:20 PM Oct 31, 2024 IST | Samyukta Karnataka

ಬೆಂಗಳೂರು: ಹಾವೇರಿಯ ಜಿಲ್ಲಾ ಪಂಚಾಯಿತಿ ಮುಖ್ಯಸ್ಥರು ಹನುಮನ ದೇವಸ್ಥಾನ ಮತ್ತು ದುರ್ಗವ್ವ ದೇವಸ್ಥಾನವನ್ನು ಸ್ವಾಧೀನಪಡಿಸಿಕೊಳ್ಳಲು ವಕ್ಫ್ ಸಮಿತಿಗೆ ಆದೇಶ ಹೊರಡಿಸಿದ್ದಾರೆ. ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನಿನ್ನೆ ವಕ್ಫ್ ಬೋರ್ಡ್ ಸದಸ್ಯರು ಸ್ಥಾನವನ್ನು ವಶಪಡಿಸಿಕೊಳ್ಳಲು ಅಲ್ಲಿಗೆ ಹೋಗಿದ್ದಾರೆ ಮತ್ತು ಸಹಜವಾಗಿ ಜನರು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು 60-70 ವರ್ಷಗಳಿಂದ ಅಲ್ಲಿ ನೆಲೆಸಿರುವ ಸ್ಥಳೀಯ ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಸ್ಥಳೀಯರನ್ನು ನಿರಾಶ್ರಿತರನ್ನಾಗಿ ಮಾಡಲು ಹೊರಟಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಈ ಕುರಿತು ಆದೇಶ ನೀಡಿರುವುದು ಅತ್ಯಂತ ವಿಷಾದನೀಯ. ಸರ್ಕಾರದ ಮತ್ತು ವಿಶೇಷವಾಗಿ ಪಂಚಾಯತ್‌ನ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಮಾಯಕ ಹಿಂದೂಗಳ ಮೇಲೆ ಕ್ರಮ ಕೈಗೊಳ್ಳುವಂತೆ ಜಮೀರ್ ಅಹಮದ್ ಅಧಿಕಾರಿಗಳಿಗೆ ಒತ್ತಾಯಿಸುತ್ತಿದ್ದಾರೆ ಎಂದಿದ್ದಾರೆ.

Tags :
#ಪ್ರಲ್ಹಾದಜೋಶಿ#ವಕ್ಫ್‌#ಹಾವೇರಿ
Next Article