ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ

03:19 PM Mar 27, 2023 IST | Samyukta Karnataka

ಚಿಕ್ಕಬಳ್ಳಾಪುರ: ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ, ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಚಿಕ್ಕಬಳ್ಳಾಪುರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದರು.
ಶಂಕರನಾಗ್ ಕನಸು ನನಸು
ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ. ರೋಪ್ ವೇ ಮಾಡಿದರೆ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕುಲವಾಗುತ್ತದೆ‌. ಈ ಭಾಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ ಎಂದರು.

Next Article