For the best experience, open
https://m.samyuktakarnataka.in
on your mobile browser.

ಹಿರಿಯರಾಗಿ ಗೌರವ ನೀಡಬೇಕು, ಆಗ ಉಳಿದವರಿಗೆ ಮಾದರಿ

03:17 PM Jan 16, 2024 IST | Samyukta Karnataka
ಹಿರಿಯರಾಗಿ ಗೌರವ ನೀಡಬೇಕು  ಆಗ ಉಳಿದವರಿಗೆ ಮಾದರಿ

ಚಿಕ್ಕಮಗಳೂರು: ಅನಂತ್ ಕುಮಾರ್ ಹೆಗಡೆ ಮುಖ್ಯಮಂತ್ರಿಗಳನ್ನು ಏಕ ವಚನದಲ್ಲಿ ಕರೆದಿರುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಮಾಜಿ ಶಾಸಕ ಸಿ.ಟಿ.ರವಿ ಎಂದು ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕು. ಆ ಗೌರವವನ್ನು ಕೊಡಲೇಬೇಕು. ಅನಂತ್ ಕುಮಾರ್ ಹೆಗಡೆ ಕಾರ್ಯಶೈಲಿ ಭಿನ್ನವಿದೆ ಹಾಗೆಂದ ಮಾತ್ರಕ್ಕೆ ಇನ್ನೋಬ್ಬರ ಮನಸ್ಸಿಗೆ ನೋವುಂಟು ಮಾಡಬಾರದು ಎಂದು ಹೇಳಿದರು.
ಇಂತಹ ಹೇಳಿಕೆಗಳನ್ನು ನಾವು ಸಮರ್ಥಿಸುವುದಿಲ್ಲ. ಅನಂತ್ ಕುಮಾರ್ ಹೆಗಡೆ ಅವರ ಭಾವನೆ ಇರಬಹುದು, ಯಾರಿಗೆ ಆಗಲಿ ಏಕವಚನದಲ್ಲಿ ಮಾತನಾಡುವುದನ್ನು, ಅಗೌರವ ತರುವುದನ್ನು ಒಪ್ಪಿಕೊಳ್ಳುವುದಿಲ್ಲ. ಅನಂತ್ ಕುಮಾರ್ ಹೆಗಡೆ ಅವರು ಹೀಗೆ ಹೇಳಿದರು ಎಂದೇಳಿ ಅವರನ್ನು ಟೀಕೆ ಮಾಡುವ ಭರದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ನಾಯಿಗೆ ಹೋಲಿಸಿರುವುದು ಅದು ಕೂಡ ತಪ್ಪೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ಅವರನ್ನು ಏಕ ವಚನದಲ್ಲಿ ಮಾತನಾಡುವುದು, ಸರ್ಜಿಕಲ್ ಸ್ಟ್ರೈಕ್ ಹೀಯಾಳಿದ್ದಾರೆ ಅದು ಕೂಡತಪ್ಪೇ. ಹಿರಿಯರಾಗಿ ಗೌರವ ನೀಡಬೇಕು ಆಗ ಉಳಿದವರಿಗೆ ಮಾದರಿಯಾಗುತ್ತದೆ ಎಂದರು.
ಭಾರತೀಯ ಮುಸ್ಲೀಮರು ದಾಳಿಕೋರರ ಜತೆ ತಮ್ಮ ಅಸ್ಮಿತೆಯನ್ನು ಗುರುತಿಸಿಕೊಳ್ಳುವುದಿಲ್ಲ. ಭಾರತೀಯತೇ ಸನಾತನ ಪರಂಪರೆಯ ಮೇಲೆ ವಿಶ್ವಾಸವಿಟ್ಟು ಇಲ್ಲಿ ಉಳಿದು ಕೊಂಡಿದ್ದಾರೆ ಎನ್ನುವ ವಿಶ್ವಾಸ ನನಗಿದೆ. ಅವರಿಗೂ ಮನ ಪರಿವರ್ತನೆ ದಿನ ಬರಬಹುದು. ಆಕ್ರಮಣ ಮಾಡಿ ಇನ್ನೊಬ್ಬರ ಮನಸ್ಸಿಗೆ ಘಾಸಿ ಮಾಡಿ ಕಟ್ಟಿದ ಮಂದಿರದಲ್ಲಿ ನಮಾಜ್ ಮಾಡಿದರೇ ಅದು ಹರಮ್ ಆಗುತ್ತದೆ ಎಂದು ಅನಿಸಬಹುದು. ಅಂದು ಅವರು ಉದಾರತೇಯನ್ನು ಪ್ರದರ್ಶನ ಮಾಡಬಹುದು ಎಂದರು.
ಇಲ್ಲಿ ಘಜನಿ, ಘೋರಿ ಮೊಗಲ್ ಜತೆ ಗುರುತಿಸಿಕೊಳ್ಳುವ ಮಾನಸಿಕತೆ ಅಪಾಯಕಾರಿ ಅದನ್ನು ನಾವು ಸಹಿಸಿಕೊಳ್ಳುವುದಿಲ್ಲ. ಅದರ ವಿರುದ್ದ ನಮ್ಮ ಭಾವನೆಗಳು ಇವೆ. ಎಲ್ಲಾ ಮುಸ್ಲಿಮರನ್ನು ಒಂದೇ ತಕಡಿಯಲ್ಲಿಟ್ಟು ತೂಗುವುದಿಲ್ಲ. ಮುಸ್ಲಿಮರು ಘಜನಿ, ಘೋರಿ, ಬಾಬರ್ ಮಾನಸಿಕತೆಯಿಂದ ಹೊರಗೆ ಬರಬೇಕು. ಅವರಿಗೆ ಶಿಶುನಾಳ ಶರೀಪರು, ಎಪಿಜೆ ಅಬ್ದುಲ್ ಕಲಾಂ ಅಂತವರು ಆದರ್ಶ ಆಗಬೇಕು. ಆಗ ನಮ್ಮಲ್ಲಿ ಸಹೋದರತ್ವ ಭಾವನೆ ಗಟ್ಟಿಯಾಗುತ್ತದೆ ಎಂದರು.