For the best experience, open
https://m.samyuktakarnataka.in
on your mobile browser.

ಹಿರಿಯ ಕಾಂಗ್ರೆಸ್ ನಾಯಕ ಇವಿಕೆಎಸ್ ಇಳಂಗೋವನ್ ಇನ್ನಿಲ್ಲ

01:23 PM Dec 14, 2024 IST | Samyukta Karnataka
ಹಿರಿಯ ಕಾಂಗ್ರೆಸ್ ನಾಯಕ ಇವಿಕೆಎಸ್ ಇಳಂಗೋವನ್ ಇನ್ನಿಲ್ಲ

ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ 2004 ಮತ್ತು 2009 ರ ನಡುವೆ ಕೇಂದ್ರ ಸರ್ಕಾರದ ಜವಳಿ ಸಚಿವರಾಗಿದ್ದರು

ತಮಿಳನಾಡು: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಶಾಸಕ ಇವಿಕೆಎಸ್ ಇಳಂಗೋವನ್ ಅವರು ಚೆನ್ನೈನಲ್ಲಿ ನಿಧನರಾದರು.
ಇಂದು ಬೆಳಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ, ಅವರಿಗೆ 75 ವರ್ಷ ವಯಸ್ಸಾಗಿದ್ದು, ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಮಿಳುನಾಡು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಈರೋಡ್ ಪೂರ್ವ ಕ್ಷೇತ್ರದ ಶಾಸಕರು ಆಗಿದ್ದ ಅವರು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರನ್ನು ನವೆಂಬರ್ 11 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಸ್ತುತ ಈರೋಡ್ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಈ ಹಿಂದೆ ತಮಿಳುನಾಡಿನ ಗೋಬಿಚೆಟ್ಟಿಪಾಳ್ಯಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ 2004 ಮತ್ತು 2009 ರ ನಡುವೆ ಕೇಂದ್ರ ಸರ್ಕಾರದ ಜವಳಿ ಸಚಿವರಾಗಿದ್ದರು

Tags :