ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿರಿಯ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ನಿಧನ

12:03 PM Nov 20, 2024 IST | Samyukta Karnataka

ಮಂಗಳೂರು: ಪ್ರಖ್ಯಾತ ಪತ್ರಕರ್ತ, ಪ್ರಖರ ಚಿಂತಕ ಮತ್ತು ಹೋರಾಟಗಾರ ವಿ.ಟಿ.ರಾಜಶೇಖರ್ ನಿಧನ ಹೊಂದಿದ್ದಾರೆ.
ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್‌ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ: ಪತ್ರಿಕಾ ವೃತ್ತಿಯನ್ನು ಒಬ್ಬ ಹೋರಾಟಗಾರನಾಗಿಯೇ ಮುನ್ನಡೆಸಿದ್ದ ರಾಜಶೇಖರ್, ಜಾತಿ ವ್ಯವಸ್ಥೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಸದಾ ಸಿಡಿಯುತ್ತಿದ್ದವರು. ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ನಂತರ ಅಲ್ಲಿಂದ ಹೊರಬಂದು 1981ರಲ್ಲಿ ದಲಿತ್ ವಾಯ್ಸ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಆ ದಿನಗಳಿಂದಲೇ ಪರಿಚಿತರಾಗಿದ್ದ ರಾಜಶೇಖರ್ ಅವರು ಒಬ್ಬ ಹಿರಿಯ ಹಿತೈಷಿಯಾಗಿ ನನಗೆ ಮಾರ್ಗದರ್ಶನ ನೀಡುತ್ತಿದ್ದವರು. ರಾಜಶೇಖರ್ ಅವರ ಸಾವು ಸಮಾಜಕ್ಕೆ ದೊಡ್ಡ ನಷ್ಟ ಮಾತ್ರವಲ್ಲ, ಅವರಂತಹ ಜನಪರ ಚಿಂತಕರ ನಿಧನದಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕೂಡಾ ಕಷ್ಟ. ತಂದೆಯನ್ನು ಕಳೆದುಕೊಂಡ ಅಮ್ನೆಷ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ, ಮಗ ಸಲೀಲ್ ಶೆಟ್ಟಿ, ಕುಟುಂಬ ವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.

Next Article