ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿರಿಯ ಶಾಸಕ ಶಾಮನೂರ ಆರೋಗ್ಯದಲ್ಲಿ ದಿಢೀರ್ ಏರುಪೇರು!

07:44 PM May 31, 2024 IST | Samyukta Karnataka

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪಗೆ ಶುಕ್ರವಾರ ದಿಢೀರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಯಿತು.
ಕಫದ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿದ್ದ ಶಿವಶಂಕರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಕಾಲು ನೋವಿನಿಂದ ಬಳಲುತ್ತಿದ್ದರು. ಸಧ್ಯ ವೈದ್ಯರು ನಾನಾ ಪರೀಕ್ಷೆಗಳನ್ನು ಮಾಡಿ ಕಫ ಹೊರತೆಗೆದಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ೯೪ ವರ್ಷದ ಶಾಮನೂರು ಶಿವಶಂಕರಪ್ಪ, ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾಗಿದ್ದಾರೆ.
ಚಿಕಿತ್ಸೆ ನಂತರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರು ಆರೋಗ್ಯವಾಗಿದ್ದಾರೆ. ಒಂದಿಷ್ಟು ಕಫದ ಸಮಸ್ಯೆ ಇತ್ತು. ಅದನ್ನು ವೈದ್ಯರು ತೆಗೆದಿದ್ದಾರೆ. ಸಧ್ಯ ಅವರು ಚೆನ್ನಾಗಿದ್ದು, ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತವಲಯದವರು ತಿಳಿಸಿದ್ದಾರೆ.

Next Article