ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಿರಿಯ ಸಾಹಿತಿ ವಿಷ್ಣು ನಾಯ್ಕ ವಿಧಿವಶ

07:33 PM Feb 18, 2024 IST | Samyukta Karnataka

ಕಾರವಾರ: ಹಿರಿಯ ಸಾಹಿತಿ, ಪತ್ರಕರ್ತ, ವಿಮರ್ಶಕ, ಕಲಾವಿದ ಹಾಗೂ ಪರಿಮಳದಂಗಳದ ಕವಿ ಎಂದೇ ಖ್ಯಾತಿ ಪಡೆದಿದ್ದ ವಿಷ್ಣು ನಾಯ್ಕ(೮೧) ಅವರು ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಅಂಕೋಲಾ ತಾಲೂಕಿನ ಅಂಬಾರಕೊಡ್ಲದಲ್ಲಿ ೧೯೪೪ ಜುಲೈ ೧ರಂದು ಜನಿಸಿದ್ದ ಅವರು ವಿದ್ಯಾರ್ಥಿಯಿರುವಾಗಲೇ ಕವಿಯಾಗಿ ಗುರುತಿಸಿಕೊಂಡಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ, ಕಲಾವಿದ ಹೀಗೆ ಅನೇಕ ಕ್ಷೇತ್ರದಲ್ಲಿ ಕೃಷಿ ಮಾಡಿದ್ದಾರೆ. ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Next Article