For the best experience, open
https://m.samyuktakarnataka.in
on your mobile browser.

ಹುಬ್ಬಳ್ಳಿ-ಪುಣೆ ವಿಮಾನ ಸಂಚಾರ ಫೆ. ೨ ರಿಂದ ಪುನರಾರಂಭ

04:38 PM Jan 17, 2024 IST | Samyukta Karnataka
ಹುಬ್ಬಳ್ಳಿ ಪುಣೆ ವಿಮಾನ ಸಂಚಾರ ಫೆ  ೨ ರಿಂದ ಪುನರಾರಂಭ

ಹುಬ್ಬಳ್ಳಿ : ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಾರ್ಗವಾಗಿ ಇನ್ನು ವಾರಕ್ಕೆ ನಾಲ್ಕು ವಿಮಾನಗಳು ನಿರಂತರವಾಗಿ ಸಂಚರಿಸಲಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ನಮ್ಮ ಪ್ರಸ್ತಾವನೆ ಮೇರೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಪುನರಾರಂಭಿಸಲಿವೆ ಎಂದು ಹೇಳಿದ್ದಾರೆ. ತಮ್ಮ ಕೋರಿಕೆ ಪ್ರಸ್ತಾವನೆ ಪರಿಗಣಿಸಿ ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಿಸಿದ್ದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಆಡಳಿತ ಮಂಡಳಿಗೆ ಸಚಿವರು ಧನ್ಯವಾದ ತಿಳಿಸಿದ್ದಾರೆ.