ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಗೆ ಮರುನಾಮಕರಣ

04:27 PM Dec 13, 2023 IST | Samyukta Karnataka

ಬೆಳಗಾವಿ : ವಿಮಾನ ನಿಲ್ದಾಣಗಳಿಗೆ ನಾಮಕರಣಗೊಳಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತದೆ ಎರಡೂ ಸದನಗಳಲ್ಲಿ ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಶಾಸಕ ಎನ್.ಹೆಚ್ ಕೊನರೆಡ್ಡಿ ಅವರು ಪ್ರಸ್ತಾಪಿಸಿದ ವಿಷಯ ಹಾಗೂ ಶ್ರೀನಿವಾಸ ಮಾನೆ ನೀಡಿದ ಪತ್ರದನ್ವಯ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಗಳಿಗೆ ನಾಮಕರಣಗೊಳಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತದೆ. ಆದರೂ ಶಾಸಕರ ಬೇಡಿಕೆ ಅನ್ವಯ ಎರಡೂ ಸದನಗಳಲ್ಲಿ ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗುವುದು ಎಂದು ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಹೆಸರಿಡಬೇಕೆಂಬ ಬೇಡಿಕೆ ಪರಿಶೀಲನೆಯಲ್ಲಿದ್ದು, ಈ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾವನೆ ಮಂಡಿಸಿ ಮುಂದಿನ ಕ್ರಮಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಅವರು ಹೇಳಿದರು. ಶಾಸಕ ಅರವಿಂದ ಬೆಲ್ಲದ್ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಎರಡೂ ಸದನಗಳ ಸರ್ವ ಸದಸ್ಯರ ಒಪ್ಪಿಗೆ ಇದ್ದು, ತಕ್ಷಣ ಸರ್ಕಾರವು ಈ ಕುರಿತು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

Next Article