ಹೈಕೋರ್ಟ್ಗೆ ಬಾಂಬ್ ಬೆದರಿಕೆ
01:09 PM Feb 15, 2024 IST | Samyukta Karnataka
ನವದೆಹಲಿ: ನ್ಯಾಯಾಲಯದ ಆವರಣದ ಮೇಲೆ ದಾಳಿ ನಡೆಸುವುದಾಗಿ ದೆಹಲಿ ಹೈಕೋರ್ಟ್ ಅಧಿಕಾರಿಗಳಿಗೆ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಗುರುವಾರ ದೆಹಲಿ ಹೈಕೋರ್ಟ್ ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರಿಜಿಸ್ಟ್ರಾರ್ ಜನರಲ್‌ಗೆ (e mail)ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್ ಮುಂದೆ ಬಾಂಬ್ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.