For the best experience, open
https://m.samyuktakarnataka.in
on your mobile browser.

ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ

07:25 PM Jan 26, 2024 IST | Samyukta Karnataka
ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ

ಕುಷ್ಟಗಿ: ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದು ಹೀಗಾಗಿ ಬಿಜೆಪಿ ಪಕ್ಷ ಬಯಸಿದ್ದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಸ್ಥಾನಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹಾಗೂ ಗಂಗಾವತಿಯ ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಪಟ್ಟಣದ ನಿವೃತ್ತ ತಹಶೀಲ್ದಾರ ಸಿ‌.ಎಂ ಹಿರೇಮಠ ಅವರ ಮನೆಗೆ ಬೆಂಕಿ ಹತ್ತಿ ತಗುಲಿ ಹಾನಿಯಾದ ಮನೆಗೆ ಭೇಟಿಕೊಟ್ಟು ನಂತರ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಪಕ್ಷದ ಜೊತೆಗೆ ಮಾತುಕತೆ ನಡೆಸಲಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಮುಗಿದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ. ಬಿಜೆಪಿ ಪಕ್ಷ ಬಯಸಿದರೆ ಹೊಂದಾಣಿಕೆಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದರು.
ಐದು ಸೀಟುಗಳು ಬಿಜೆಪಿ ಬಿಟ್ಟುಕೊಡಬೇಕು: ಮುಂದಿನ ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ನನ್ನ ಪಕ್ಷದ ವತಿಯಿಂದ ಚುನಾವಣಾ ಕಾರ್ಯತಂತ್ರ ರೂಪಿಸಲಾಗುತ್ತಿದ್ದು. ಲೋಕಸಭೆ ಚುನಾವಣೆಯಲ್ಲಿ ಕೆಆರ್‌ಪಿಪಿಯಿಂದ ೨೮ ಕ್ಷೇತ್ರದಲ್ಲೂ ಸ್ಪರ್ಧಿಸುವ ಶಕ್ತಿ ಇಲ್ಲ ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಬಯಸಿ ಹೊಂದಾಣಿಕೆಗೆ ಮುಂದಾದರೆ. ಬಳ್ಳಾರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಹಾಗೂ ಚಿತ್ರದುರ್ಗ ಲೋಕಸಭೆ ಸ್ಥಾನಗಳನ್ನು ಬಿಟ್ಟುಕೊಡುವಂತೆ ಕೇಳುತ್ತೇನೆ. ನನ್ನ ಬೆಂಬಲ ಏನಿದ್ದರೂ ಸಹ ಬಿಜೆಪಿ ಪಕ್ಷಕ್ಕೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ ಕಾಂಗ್ರೆಸ್ ಪಕ್ಷದ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ವೆಸ್ಟ್ ಬಾಡಿ: ಗಂಗಾವತಿ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದ್ದಾರೆ ನಾನು ಅವರ ಪ್ರೀತಿಗೆ ಚಿರಋಣಿಯಾಗಿದ್ದು ಅಭಿವೃದ್ಧಿ ವಿಚಾರದಲ್ಲಿ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಅಡ್ಡಿಪಡಿಸುತ್ತಿದ್ದರು, ಆದರೆ ಅನ್ಸಾರಿ ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ವೇಸ್ಟ್ ಬಾಡಿ ಆಗಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ಇಕ್ಬಾಲ್ ಅನ್ಸಾರಿಯನ್ನು ಕಾಂಗ್ರೆಸ್ ಪಕ್ಷದವರು ಕಸದ ಬುಟ್ಟಿಗೆ ಹಾಕುವುದು ಮಾತ್ರ ಗ್ಯಾರಂಟಿ ಆಗಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಕೆಆರಪಿಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ, ಸಿ.ಎಂ.ಹಿರೇಮಠ, ಜಿಲ್ಲಾಧ್ಯಕ್ಷ ಸಂಗಮೇಶ್ ಬಾಗವಾಡಗಿ, ಸಂಗಮೇಶ್ ಗುಮಗೇರಿ, ವೆಂಕಟೇಶ್ ಜಬಲಗುಡ್ಡ, ಯಮನೂರ ಚೌಡ್ಕಿ ಸೇರಿದಂತೆ ಅನೇಕರು ಇದ್ದರು.