ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹೊಸದುರ್ಗದಲ್ಲಿ ಕರಡಿ ಪ್ರತ್ಯಕ್ಷ

09:19 PM May 12, 2024 IST | Samyukta Karnataka

ಹೊಸದುರ್ಗ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಂಭಾಗದಲ್ಲಿ ಹಾಡು ಹಗಲಲ್ಲೆ ಕರಡಿ ಪ್ರತ್ಯಕ್ಷವಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬಿ.ಸಿ.ಎಂ. ವಸತಿ ನಿಲಯ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದ ವಿದ್ಯಾರ್ಥಿಗಳು ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಕರಡಿ ಈ ಮಾರ್ಗವಾಗಿ ಚಲಿಸುವುದನ್ನು ಕಂಡಿದ್ದಾರೆ. ನಾಯಿ ಬೊಗಳುತ್ತ ಕರಡಿಯನ್ನ ಬೆನ್ನಟ್ಟಿದೆ. ಈ ದೃಶ್ಯವನ್ನು ನೋಡಿದ ತಕ್ಷಣ ಅಲ್ಲಿನ ಜನರು ಕೂಡಲೇ ಕೂಗಾಡಿ ಕರಡಿಯನ್ನು ಓಡಿಸಿದ್ದಾರೆ.
ಇದೇ ಮಾರ್ಗದಲ್ಲಿ ವಸತಿ ನಿಲಯಗಳಿದ್ದು, ವಿದ್ಯಾರ್ಥಿಗಳು ಓಡಾಡಲು ಆತಂಕಪಡುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಕರಡಿ ಸೆರೆಗೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Next Article