೧೦ ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ
10:30 PM Mar 08, 2024 IST | Samyukta Karnataka
ಕಲಬುರಗಿ: ರಾಜ್ಯದಲ್ಲಿ ಈಗಾಗಲೇ ೧೪ಸಾವಿರ ಶಿಕ್ಷಕರ ನೇಮಕಾತಿಯಾಗಿದ್ದು, ಶೀಘ್ರವೇ ಮತ್ತೆ ೧೦ ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು. ಅನುಮೋದನೆ ದೊರೆತ ತಕ್ಷಣ ನೇಮಕ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ೪೩,೧೦೦ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾಸಿಕ ೧೦ ಸಾವಿರ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ೧೦,೨೦೦ ರೂ. ವೇತನ ನೀಡಲಾಗುತ್ತಿದೆ. ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.