For the best experience, open
https://m.samyuktakarnataka.in
on your mobile browser.

೧೨೩ ವಸತಿ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

11:33 PM Feb 23, 2024 IST | Samyukta Karnataka
೧೨೩ ವಸತಿ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ೧೨೩ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮಾ.೧೫ರ ಒಳಗೆ ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತರ ಸಮುದಾಯದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿಯ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಗೆ ಭೇಟಿ ನೀಡಬೇಕು. ಹೆಚ್ಚಿನ ವಿವರಗಳಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ವೆಬ್‌ಸೈಟ್ https://dom.karnataka.gov.in ನೋಡಿ ಅಥವಾ ಸಹಾಯವಾಣಿ ೮೨೭೭೭೯೯೯೯೯, ೦೮೦-೨೨೫೩೫೯೦೨ ಸಂಪರ್ಕಿಸಿ.
ಅರ್ಹತೆಗಳೇನು?
೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದವರ ವಾರ್ಷಿಕ ಆದಾಯ ರೂ. ೨,೫೦,೦೦೦, ಹಿಂದುಳಿದ ವರ್ಗ ಪ್ರವರ್ಗ-೧ಕ್ಕೆ ರೂ. ೨,೫೦,೦೦೦, ಹಿಂದುಳಿದ ವರ್ಗದ ೨ಎ, ಎಬಿ, ೩ಎ, ೩ಬಿಗೆ ರೂ. ೧,೦೦,೦೦೦ ವಾರ್ಷಿಕ ಆದಾಯ ನಿಗದಿಪಡಿಸಲಾಗಿದೆ.
ಸೂಚನೆ: ಆನ್‌ಲೈನ್ ಅರ್ಜಿ ಹಾಕುವ ವೇಳೆ SATS ಸಂಖ್ಯೆಯನ್ನು ವಿದ್ಯಾರ್ಥಿಯು ಈಗಾಗಲೇ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ ಪಡೆದು ಮತ್ತು ಮೀಸಲಾತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ, ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆಯ ಮುಖ್ಯಸ್ಥರನ್ನು ಸಂಪರ್ಕಿಸಬೇಕು.