೩೧ರಂದು ರಾಜಭವನ ಚಲೊ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಘನತವೆತ್ತ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಆಗಸ್ಟ್ ೩೧ರಂದು ರಾಜಭವನ ಚಲೋ ಹಮ್ಮಿಕೊಂಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಪ್ರಾಮಾಣಿಕ ಕುಮಾರಸ್ವಾಮಿ ವಿರುದ್ಧ ಅಕ್ರಮ ವಾಗಿ ಗಣಿಗಾರಿಕೆಗೆ ಮಂಜೂರು ಮಾಡಿದ ಪ್ರಕರಣವೂ ರಾಜ್ಯಪಾಲರ ಮುಂದಿದೆ. ಲೋಕಾಯುಕ್ತ ಸಂಸ್ಥೆಯು ತನಿಖೆ ನಡೆಸಿ ಕುಮಾರಸ್ವಾಮಿ ವಿಚಾರಣೆಗೆ ಅನುಮತಿ ಕೋರಿದ್ದಾರೆ. ಆದರೂ ವಿಚಾರಣೆಗೆ ಅನು ಮತಿ ನೀಡಿಲ್ಲ ಎಂದರು. ರಾಜ್ಯಪಾಲರು ಬೇರೆ ನಾಯಕರ ವಿರುದ್ಧ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ನೀಡಿಲ್ಲ. ಆದರೆ ಯಾವುದೇ ಪ್ರಾಥಮಿಕ ತನಿಖೆ ನಡೆಯದಿದ್ದರೂ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದರು.