ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

100 ನೇ ಜನ್ಮ ದಿನ: ತಂದೆಗೆ ಗೌರವ ನಮನ ಸಲ್ಲಿಸಿದ ಬೊಮ್ಮಾಯಿ

03:42 PM Jun 06, 2024 IST | Samyukta Karnataka

ಹುಬ್ಬಳ್ಳಿ : ದೇಶ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಎಸ್ ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಅವರಿಗೆ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನನ್ನ ಪೂಜ್ಯ ತಂದೆಯವರಾದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಅವರ 100 ನೇ ಜನ್ಮದಿನಾಚರಣೆಯ ದಿನದಂದು ಅವರಿಗೆ ಅನಂತ ಪ್ರಣಾಮಗಳನ್ನು ಸಲ್ಲಿಸುತ್ತೇನೆ.
ಜನಸೇವಾ ತತ್ಪರರಾಗಿ ಅವರು ಪ್ರತಿಪಾದಿಸಿದ ಮೌಲ್ಯಗಳು, ಅವರ ಜೀವನ, ಅವರು ತೋರಿದ ದಾರಿ, ಕಲಿಸಿ ಕೊಟ್ಟ ಪಾಠ ನನ್ನ ಜೀವನದ ಆಧಾರ ಮತ್ತು ಆದರ್ಶವಾಗಿದೆ ಎಂದು ತಿಳಿಸಿದ್ದಾರೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಎಸ್. ಆರ್. ಬೊಮ್ಮಾಯಿಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ವಿರುದ್ದ ನಡೆದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರದ ಮಾನವ ಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಿಸಿ ಜನಾನುರಾಗಿಯಾಗಿದ್ದರು.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಎಸ್. ಆರ್. ಬೊಮ್ಮಾಯಿಯವರ 100 ನೇ ವರ್ಷದ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ‌. ಈಶ್ವರ ಉಳ್ಳಾಗಡ್ಡಿ ಹುಬ್ಬಳ್ಳಿ ಕಿತ್ತೂರು ಚನ್ನಮ್ಮ ಸರ್ಕಲ್ ಹತ್ತಿರ ಹಳೆ ಕೋರ್ಟ್ ಬಳಿ ಇರುವ ಎಸ್. ಆರ್. ಬೊಮ್ಮಾಯಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ವಿಜಯಾನಂದ ಹೊಸಕೋಟಿ, ಬಿಜೆಪಿ ಮಹಾನಗರ ಪಾಲಿಕೆ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಬಾಳು ಮಗಜಿ ಗುಂಡಿ, ಲಕ್ಷ್ಮಣ್ ಉಪ್ಪಾರ್, ಚನ್ನು ಪಾಟೀಲ್ ಹಾಗೂ ಉಡುಪಿ ಮಂಜುನಾಥ್ ಹಾಜರಿದ್ದರು.

Next Article