ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

100 ವಿದ್ಯುತ್ ಚಾಲಿತ ಬಸ್ ಜನಸೇವೆಗೆ

01:29 PM Dec 26, 2023 IST | Samyukta Karnataka

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 100 ವಿದ್ಯುತ್ ಚಾಲಿತ ಬಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ.
ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ?
ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿದೆ. ಇದರಿಂದ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ.
ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ.
ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದಿದ್ದಾರೆ.

Next Article