For the best experience, open
https://m.samyuktakarnataka.in
on your mobile browser.

115ಕೋಟಿಯ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಿದ ಸಾಗರ್‌ ಖಂಡ್ರೆ

01:50 PM Aug 13, 2024 IST | Samyukta Karnataka
115ಕೋಟಿಯ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಿದ ಸಾಗರ್‌ ಖಂಡ್ರೆ

ಬೆಂಗಳೂರು: 115ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿಸುವಂತೆ ಸಾಗರ್‌ ಖಂಡ್ರೆ ಅವರು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಿನ್ನೆ ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಭೇಟಿಯಾಗಿ ಅಭಿನಂದಿಸಿ ಬೀದರ ಲೋಕಸಭಾ ಕ್ಷೇತ್ರಕ್ಕೆ ಸಂಭಂದಿಸಿದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದೆನು. PMKSY(HKKP-SMI) ಯೋಜನೆಯಡಿ ಬರಪೀಡಿತ ಪ್ರದೇಶವಾದ ಬೀದರ ಲೋಕಸಭಾ ಕ್ಷೇತ್ರವು ಸಹ ಇದ್ದು ಕ್ಷೇತ್ರದ ಕೃಷಿ ಭೂಮಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ #ಬೀದರ ಕ್ಷೇತ್ರದಿಂದ ಸುಮಾರು #115ಕೋಟಿ ರೂ. ಗಳ #50ಪ್ರಸ್ತಾವನೆಗಳು ಕೇಂದ್ರದ ಮುಂದಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವಂತೆ ಮನವಿ ಪತ್ರ ಸಲ್ಲಿಸಿರುವದಾಗಿ ತಿಳಿಸಿದ್ದಾರೆ.