12 ವರ್ಷಗಳ ಬಳಿಕ ರಣಜಿಯಲ್ಲಿ ವಿರಾಟ್ ದರ್ಶನ
ವಿರಾಟ್ ಕೊಹ್ಲಿ ಅವರು 4ನೇ ಬ್ಯಾಟಿಂಗ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ
ನವದೆಹಲಿ: 12 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಮತ್ತೆ ರಣಜಿ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.
ನಗರದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂ-ಡಿ ಪಂದ್ಯದಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದೆಹಲಿ ತಂಡದ ನಾಯಕ ಆಯುಷ್ ಬದೋನಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಪಂದ್ಯಕ್ಕಾಗಿ ಪ್ರಕಟಿಸಿದ ಪ್ಲೇಯಿಂಗ್ ಇಲೆವೆನ್ನಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರುವುದು ವಿಶೇಷ. ಆದರೆ ಈ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ. ವಿರಾಟ್ ಕೊಹ್ಲಿ ಅವರು 4ನೇ ಬ್ಯಾಟಿಂಗ್ ಆರ್ಡರ್ನಲ್ಲಿ ಬ್ಯಾಟ್ ಬೀಸಲಿದ್ದಾರೆ. ಇಂದಿನ ಪಂದ್ಯದಲ್ಲಿ ಕೊಹ್ಲಿ ಫೀಲ್ಡಿಂಗ್ ಮಾಡುವುದನ್ನು ನೋಡಲು ಸಾಕಷ್ಟು ಜನ ಸೇರಿದ್ದಾರೆ. ಈ ರಣಜಿ ಪಂದ್ಯ ನೋಡಲು 10 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸೇರಿದ್ದಾರೆ. ರಣಜಿ ಟ್ರೋಫಿ ಪಂದ್ಯವೊಂದಕ್ಕೆ ಇಷ್ಟೊಂದು ಸಂಖ್ಯೆಯಲ್ಲಿ ಪ್ರೇಕ್ಷಕರು ಬರುವುದು ವಿಶೇಷವಾಗಿದೆ.