For the best experience, open
https://m.samyuktakarnataka.in
on your mobile browser.

15 ಶಾಲೆಗಳಿಗೆ ಬಾಂಬ್ ಬೆದರಿಕೆ

10:35 AM Dec 01, 2023 IST | Samyukta Karnataka
15 ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ, ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಶಾಲೆಗಳಿಗೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ದಯಾನಂದ್, ಶಾಲೆಗಳಿಗೆ ಬಾಂಬ್​ ಪತ್ತೆ ದಳ, ನಿಷ್ಕ್ರಿಯ ದಳ ರವಾನಿಸಿದ್ದೇವೆ. ಬೆದರಿಕೆ ಸಂದೇಶ ಬಂದ ಶಾಲೆಗಳಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ. ಹೀಗಾಗಿ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.