For the best experience, open
https://m.samyuktakarnataka.in
on your mobile browser.

2ಎ ಮೀಸಲಾತಿಗೆ ಒತ್ತಾಯಿಸಿ ಡಿ. 10ರಂದು ಸುವರ್ಣಸೌಧಕ್ಕೆ ಮುತ್ತಿಗೆ

03:23 PM Nov 27, 2024 IST | Samyukta Karnataka
2ಎ ಮೀಸಲಾತಿಗೆ ಒತ್ತಾಯಿಸಿ ಡಿ  10ರಂದು ಸುವರ್ಣಸೌಧಕ್ಕೆ ಮುತ್ತಿಗೆ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಡಿ.10 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣಸೌಧಕ್ಕೆ ಟ್ರ‍್ಯಾಕ್ಟರ್ ಗಳೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮದ ಗುರುಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಸುವರ್ಣ ಸೌಧಕ್ಕೆ ಶಾಂತಿಯುತ ಮುತ್ತಿಗೆ ಹಾಕಲಾಗುವುದು ಹಾಗೂ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತೇವೆ ಎಂದರು. ರಾಜ್ಯ ಸರ್ಕಾರ ಮೀಸಲಾತಿ ಕಲ್ಪಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಯಾವುದೇ ವದಂತಿಗೆ ಸುದ್ದಿಗೆ ಗಮನಕೊಡದೆ ಗುರುಗಳ ಹೋರಾಟಕ್ಕೆ ದಡಮುಟ್ಟಿಸಬೇಕು ಸಮಾಜ ಬಾಂಧವರು ಹೆಚ್ವಿಸ ಸಂಖ್ಯೆಯಲ್ಲಿ ಆಗಮಿಸಿ ಹೋರಾಟದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ನಮ್ಮ ಹೋರಾಟ ಯಾವುದೇ ವ್ಯಕ್ತಿ, ಪಕ್ಷ ಹಾಗೂ ಸರ್ಕಾರದ ವಿರುದ್ದವಲ್ಲ. ಪಂಚಮಸಾಲಿನಡಿಗೆ ಬೆಳಗಾವಿ ಸುವರ್ಣಸೌಧದ ವರೆಗೆ ಘೋಷವಾಕ್ಯದೊಂದಿಗೆ ನಮ್ಮ ಹೋರಾಟ ನಡೆಯಲಿದೆ ಎಂದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಶಿಕ್ಷಣಕ್ಕಾಗಿ ಉದ್ಯೋಗಕ್ಕಾಗಿ ಮೀಸಲಾತಿ ಪಡೆಯಲು 2 ಎಗೆ ಸೇರ್ಪಡೆ ಮಾಡಬೇಕೆಂದು ನಾಲ್ಕು ವರ್ಷದಿಂದ ನಿರಂತರವಾಗಿ ಪ್ರಾಮಾಣಿಕ ಹೋರಾಟ ಮಾಡುತ್ತಾ ಬಂದಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಕೊನೆಗಳಿಗೆಯಲ್ಲಿ ನಿರ್ಧಾರ ತೆಗೆದುಕೊಂಡಿತಾದರೂ ಮೀಸಲಾತಿ ಪ್ರಸ್ತಾಪ ಅಲ್ಲಿಗೆ ಸ್ಥಗಿತವಾಗಿತ್ತು. ಆದರೆ ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು ಹಾಗೂ ಹೋರಾಟ ಗಟ್ಟಿಗೊಳಿಸಲು ನಿರಂತರ ಹೋರಾಟ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ ನಮ್ಮ ಹೋರಾಟಕ್ಕೆ ಮನ್ನಣೆ ನೀಡುತ್ತಿಲ್ಲ ಮುಖ್ಯಮಂತ್ರಿಗಳು ಮೀಸಲಾತಿ ಕುರಿತು ಸಭೆ ಕರೆಯುವುದಾಗಿ ಹೇಳಿದ್ದರು ಆದರೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರಕ್ಕೆ ನಮ್ಮ ಕೂಗು ಮುಟ್ಟುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್, ಮಾಜಿ ಮೇಯರ್ ಬಿ.ಜಿ ಅಜಯಕುಮಾರ್, ಕಾರಿಗನೂರುಕಲ್ಲೇಶಪ್ಪ, ಚನ್ನಬಸವನಗೌಡ್ರು, ಮಯೂರ್, ಆನಂದ ಜಿರ್ಲೆ, ಬಿ.ಜಿ ಭರತ್, ಕೊಟ್ರೇಶ್, ಚಂದ್ರು, ಮಹೇಶ್ ಉಪಸ್ಥಿತರಿದ್ದರು.