ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

2027ರೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ ಸಿಎಂ ಸಿದ್ದರಾಮಯ್ಯ ವಿಶ್ವಾಸ

06:04 PM Sep 06, 2024 IST | Samyukta Karnataka

ಹಾಸನ(ಸಕಲೇಶಪುರ): 2026-27ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು ಚಿಕ್ಕಬಳ್ಳಾಪುರದಲ್ಲಿ ತಾನೇ ನಿರ್ವಹಿಸಿ, ಇಂದು ಮೊದಲನೇ ಹಂತದ ಯೋಜನೆಯನ್ನು ಸಂತೋಷದಿಂದ ಉದ್ಘಾಟಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಈ ಯೋಜನೆಯ ಪರಿಷ್ಕೃತ ಅಂದಾಜು 23,252 ಕೋಟಿ ರೂ.ಗಳಾಗಿದ್ದು, ಇದುವರೆಗೆ 16,152 ಕೋಟಿ ರೂ.ಗಳನ್ನು ವೆಚ್ಚವಾಗಿದ್ದು, ಇನ್ನುಳಿದ 6-7 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದರು.
ಸಕಲೇಶಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಯೋಜನೆಗೆ ಇಲ್ಲಿನ ನೀರು ಬಳಸಿಕೊಳ್ಳಲಾಗುತ್ತಿದೆ. ಈ ಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುವ ಬೇಡಿಕೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನೀರು ಕೊರತೆಯಿರುವ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದಾಗಿದ್ದು, ರಾಜ್ಯದ ಜನರಿಗೆ ಪ್ರಯೋಜನಕಾರಿಯಾಗಿದೆ ಎಂದರು.

Next Article