ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

22ರಂದು ಹೈಕೋರ್ಟ್‌ನಲ್ಲಿ ದರ್ಶನ್ ಅರ್ಜಿ ವಿಚಾರಣೆ

10:20 PM Oct 17, 2024 IST | Samyukta Karnataka

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅ. ೨೨ರಂದು ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾಗಿರುವ ನಟ ದಶನ್‌ಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿರುವ ಕುರಿತು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಪರಿಗಣಿಸಲು ಕೋರಿ ದರ್ಶನ್ ಪರ ವಕೀಲ ಎಸ್. ಸುನೀಲ್ ಕುಮಾರ್ ಮೆಮೊ ಸಲ್ಲಿಸಿದರು. ಆ ಮೆಮೊ ಆಧರಿಸಿ ಅರ್ಜಿಯನ್ನು ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ನಗರದ ೫೭ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಅ. ೧೪ರಂದು ದರ್ಶನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರಿಂದ ಅ. ೧೫ರಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್, ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ತಡವಾಗಿ ದಾಖಲು ಮಾಡಿಕೊಳ್ಳಲಾಗಿದೆ. ಶವ ಪರೀಕ್ಷೆಯನ್ನೂ ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿಸಿದ್ದಾರೆ.

Next Article