For the best experience, open
https://m.samyuktakarnataka.in
on your mobile browser.

3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ

08:10 PM Jul 26, 2024 IST | Samyukta Karnataka
3 ದಿನ ಇ ಸ್ವತ್ತು ತಂತ್ರಾಂಶ ಸ್ಥಗಿತ

ಬೆಂಗಳೂರು: ಇ-ಸ್ವತ್ತು ತಂತ್ರಾಂಶ 3 ದಿನ ಕಾರ್ಯ ನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ ಜುಲೈ 27 ರಿಂದ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶ ಕಾರ್ಯನಿರ್ವಹಿಸುವುದಿಲ್ಲ. ತಂತ್ರಾಂಶ ಕಾರ್ಯಾರಂಭಿಸಿದ ನಂತರ ಆಗಸ್ಟ್‌ 2ರವರೆಗೆ ಪ್ರತಿನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದಿದ್ದಾರೆ.