For the best experience, open
https://m.samyuktakarnataka.in
on your mobile browser.

3 ನೇ ಟೆಸ್ಟ್ ದಿನ: ಮಿಂಚಿದ ಮೊಹಮ್ಮದ್ ಸಿರಾಜ್

03:34 PM Feb 17, 2024 IST | Samyukta Karnataka
3 ನೇ ಟೆಸ್ಟ್ ದಿನ  ಮಿಂಚಿದ ಮೊಹಮ್ಮದ್ ಸಿರಾಜ್

ರಾಜ್​ಕೋಟ್​: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್​ ಇಂಡಿಯಾ ವೇಗಿ ಮೊಹಮ್ಮದ್​ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ.
ಮೂರನೇ ದಿನದಾಟ ಶುರು ಮಾಡಿದ ಇಂಗ್ಲೆಂಡ್ ತಂಡವನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಸಿರಾಜ್ 21.1 ಓವರ್​ಗಳಲ್ಲಿ 84 ರನ್ ನೀಡಿ 4 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ 319 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು, ನಾಲ್ಕು ವಿಕೆಟ್​ ಕಿತ್ತು ಮಿಂಚಿದ ಟೀಮ್​ ಇಂಡಿಯಾ ವೇಗಿ ಮೊಹಮ್ಮದ್​ ಸಿರಾಜ್ ಅವರು ವಿಶೇಷ ಮೈಲುಗಲ್ಲೊಂದನ್ನು ತಲುಪಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ 33ನೇ ಬೌಲರ್​ ಎನಿಸಿಕೊಂಡಿದ್ದಾರೆ.