For the best experience, open
https://m.samyuktakarnataka.in
on your mobile browser.

30 ಲಕ್ಷ ಹೂವುಗಳ ಪುಷ್ಪ ಪ್ರದರ್ಶನ

03:50 PM Aug 08, 2024 IST | Samyukta Karnataka
30 ಲಕ್ಷ ಹೂವುಗಳ ಪುಷ್ಪ ಪ್ರದರ್ಶನ

ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ

ಬೆಂಗಳೂರು: ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಂವಿಧಾನಶಿಲ್ಪಿ ಡಾ||ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಏರ್ಪಡಿಸಲಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ರವರ ಜೀವನಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಆಧರಿಸಿದ ಫಲಪುಷ್ಪ ಪ್ರದರ್ಶವನ್ನು ಏರ್ಪಡಿಸಲಾಗಿದೆ. ಅಂಬೇಡ್ಕರ್‌ವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ. ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ ಎಂದರು.

Tags :