4 ರ‍್ಯಾಂಕ್ ಪಡೆದ ಶಿರಸಿ ಶೈಕ್ಷಣಿಕ ಜಿಲ್ಲೆ ವಿದ್ಯಾರ್ಥಿಗಳು: 5 ನೇ ಸ್ಥಾನಕ್ಕೆ ಜಿಗಿದ ಉತ್ತರಕನ್ನಡ ಶೈಕ್ಷಣಿಕ ಜಿಲ್ಲೆ!
ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರಕನ್ನಡ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಫಲಿತಾಂಶದಲ್ಲಿ ಶಿರಸಿಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
625ಕ್ಕೆ 624 ಅಂಕಗಳನ್ನ ಪಡೆದ ಶಿರಸಿಯ ಮಾರಿಕಾಂಬಾ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿ ದರ್ಶನ ಭಟ್, ಶಿರಸಿ ತಾಲ್ಲೂಕಿನ ಗೋಳಿಯ ಸಿದ್ಧಿವಿನಾಯಕ ಹೈಸ್ಕೂಲ್‌ನ ಚಿನ್ಮಯಿ ಹೆಗಡೆ ಹಾಗೂ ಶಿರಸಿಯ ಭೈರುಂಬೆಯ ಶ್ರೀ ಶಾರದಾಂಬಾ ಇಂಗ್ಲೀಷ್ ಮಾಧ್ಯಮ ಶಾಲೆಯ ಶ್ರೀರಾಮ ಕೆ.ಎಂ ಈ ಸಾಧನೆ ಮಾಡಿದ್ದಾರೆ. ಅಲ್ಲದೇ ಗೋಳಿಯ ಸಿದ್ಧಿವಿನಾಯಕ ಹೈಸ್ಕೂಲ್‌ನ ತೃಪ್ತಿ ರಾಮಚಂದ್ರ ಗೌಡ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾಳೆ.
ಇನ್ನು ವಿದ್ಯಾರ್ಥಿಗಳ ಸಾಧನೆಗೆ ಪಾಲಕರು, ಶಾಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಇದೀಗ ಎಲ್ಲೆಡೆಯಿಂದಲೂ ವಿದ್ಯಾರ್ಥಿಗಳಿಗೆ ಶುಭಾಯಯಗಳನ್ನು ಕೋರಲಾಗುತ್ತಿದೆ.
ಇನ್ನು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಉತ್ತರಕನ್ನಡ ಶೈಕ್ಷಣಿಕ ಜಿಲ್ಲೆ 5 ನೇ ಸ್ಥಾನ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ 8ನೇ ಸ್ಥಾನ ಪಡೆದಿದೆ. ಕಳೆದ ವರ್ಷ ಉತ್ತರಕನ್ನಡ ಶೈಕ್ಷಣಿಕ ಜಿಲ್ಲೆ 12ನೇ ಸ್ಥಾನ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ 23 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಉತ್ತಮ ಫಲಿತಾಂಶದೊಂದಿಗೆ ಸಾಧನೆ ಮಾಡಿದೆ.