500 ಮನೆಗಳನ್ನು ಹಸ್ತಾಂತರಿಸಿದ ಸಿಎಂ
ಬಳ್ಳಾರಿ: ರಾಜೀವ್ ಗಾಂಧಿ ವಸತಿ ನಿಗಮದಿಂದ ಬಳ್ಳಾರಿ ಮತ್ತು ಸಂಡೂರಿನಲ್ಲಿ 135 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರು 2172 ಮನೆಗಳ ಪೈಕಿ ಪೂರ್ಣಗೊಂಡ ೫೦೦ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಸಂಡೂರು ಪಟ್ಟಣದಲ್ಲಿ ಆಯೋಜನೆ ಮಾಡಿದ್ದ ಸಾಧನಾ ಸಮಾವೇಶದ ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ತ ನೀಡುವ ಮೂಲಕ ಹಸ್ತಾಂತರಿಸಿದರು. ಆರ್ ಜೆ ಆರ್ ಎಚ್ ಸಿಲ್ ನಿಗಮದಿಂದ ಕಳೆದ ಕೆಲ ವರ್ಷಗಳಿಂದ ೨೧೭೩ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಹಲವು ಅಡೆ ತಡೆಗಳಿಂದ ಮನೆಗಳ ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಸದ್ಯಕ್ಕೆ ನಿರ್ಮಾಣ ಕಾರ್ಯದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಉಳಿದ ಮನೆಗಳ ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದ್ದು, ತ್ವರಿತವಾಗಿ ಪೂರ್ಣ ಗೊಳಿಸಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ವಸತಿ ಸಚಿವ ಜಮೀರ್ ಅಹಮದ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಶಾಸಕರು ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.